alex Certify Shakti Yojana : ‘ಶಕ್ತಿ ಯೋಜನೆ’ ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗಲಿದೆ’ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shakti Yojana : ‘ಶಕ್ತಿ ಯೋಜನೆ’ ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗಲಿದೆ’ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್( Lakshmi Hebbalkar)   ಹೇಳಿದರು.

ಅವರು ನಿನ್ನೆ ಉಡುಪಿಯು ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ 20,000 ಕ್ಕೂ ಅಧಿಕ ಸರ್ಕಾರಿ ಬಸ್ ಗಳಿದ್ದು ಅವುಗಳಲ್ಲಿ 18609 ಬಸ್ ಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ದೊರೆಯಲಿದ್ದು, ರಾಜ್ಯದ ಒಟ್ಟು ಸರ್ಕಾರಿ ಬಸ್ಗಳಲ್ಲಿನ ಶೇ.95 ಬಸ್ ಗಳಲ್ಲಿ ಪ್ರತಿ ದಿನ 41.8 ಲಕ್ಷ ಮಹಿಳೆಯರು ತಮ್ಮ ಪ್ರತಿದಿನದ ದೈನಂದಿನ ದುಡಿಮೆ ಮತ್ತಿತರ ಕಾರ್ಯಗಳಿಗೆ ಬಸ್ ಗಳಲ್ಲಿ ಸಂಚರಿಸಲಿದ್ದು, ಈ ಉಚಿತ ಪ್ರಯಾಣವು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಜೀವನಕ್ಕೆ ನೆರವಾಗಲಿದೆ. ಈ ಯೋಜನೆಯಿಂದ ಸರ್ಕಾರಕ್ಕೆ ವಾರ್ಷಿಕ 4051 ಕೋಟಿ ರೂ ವೆಚ್ಚವಾಗಲಿದ್ದು, ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.
ರಾಜ್ಯ ಸರ್ಕಾರವು ಚುನಾವಣಾ ಅವಧಿಯಲ್ಲಿ ನೀಡಿದ ಉಳಿದ 4 ಗ್ಯಾರಂಟಿಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದ ಸಚಿವರು , ಗೃಹಲಕ್ಷ್ಮಿ ಯೋಜನೆಗೆ ರಾಜ್ಯಾದ್ಯಂತ ಆಗಸ್ಟ್ 15 ರಂದು ಚಾಲನೆ ನೀಡಲಾಗುವುದು. ರಾಜ್ಯದ ಬಿಪಿಎಲ್ ಮತ್ತು ಎಪಿಎಲ್ ನ ಎಲ್ಲಾ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದಾಗಿದ್ದು, ಈ ಕುರಿತ ಅರ್ಜಿ ನಮೂನೆಯನ್ನು ಇನ್ನು 2 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಆನ್ಲೈನ್ ಮೂಲಕ ಅಥವಾ ಸಿಡಿಪಿಓ ಗಳ ಮೂಲಕ ,ಅಂಗನವಾಡಿ ಶಿಕ್ಷಕರ ಮೂಲಕ ಹಾಗೂ ಗ್ರಾಮ ಒನ್ ಮೂಲಕ ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...