HomeKarnatakaGOOD NEWS: ಇಂದಿರಾ ಕ್ಯಾಂಟೀನ್ ಪುನರಾರಂಭ; ಸಿಎಂ ಸಿದ್ದರಾಮಯ್ಯ ಮಾಹಿತಿ

GOOD NEWS: ಇಂದಿರಾ ಕ್ಯಾಂಟೀನ್ ಪುನರಾರಂಭ; ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿರುವ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಪುನರಾರಂಭ ಮಾಡುವುದಾಗಿ ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಪುನರಾರಂಭದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಗಾಗಲೇ ಹಲವೆಡೆ ಇಂದಿರಾ ಕ್ಯಾಂಟೀನ್ ಆರಂಭವಾಗಿದೆ. ಅಧಿಕೃತವಾಗಿ ಎಲ್ಲಾ ವಾರ್ಡ್ ಗಳಲ್ಲಿ ಒಂದೊಂದು ಕ್ಯಾಂಟಿನ್ ಆರಂಭಿಸಲು ಸೂಚಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರ 50% ಹಾಗೂ ಪಾಲಿಕೆ 50% ಹಣ ಕೊಡಬೇಕು. ಬೆಂಗಳೂರಿನಲ್ಲಿ ಕನಿಷ್ಟ 250 ಕ್ಯಾಂಟೀನ್ ಆರಂಭಕ್ಕೆ ಸೂಚಿಸಲಾಗಿದೆ. ಕ್ವಾಲಿಟಿ, ಕ್ವಾಂಟಿಟಿ, ಸ್ವಚ್ಛತೆ ಇರಬೇಕು. ಊಟ, ಊಪಹಾರ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮೆನುವಿನಲ್ಲಿಯೂ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular