HomeKarnatakaBIG NEWS: ಲೋಕಸಭಾ ಚುನಾವಣೆಯಲ್ಲಿ BJP-JDS ಮೈತ್ರಿ; ಮಾಜಿ ಸಿಎಂ HDK ಹೇಳಿದ್ದೇನು?

BIG NEWS: ಲೋಕಸಭಾ ಚುನಾವಣೆಯಲ್ಲಿ BJP-JDS ಮೈತ್ರಿ; ಮಾಜಿ ಸಿಎಂ HDK ಹೇಳಿದ್ದೇನು?

ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಬಿಜೆಪಿ ಜೊತೆ ಮೈತ್ರಿ ಎಂಬುದು ಕೇವಲ ವದಂತಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜಕಾರಣದಲ್ಲಿ ಚರ್ಚೆ, ಊಹಾಪೋಹಗಳು ಹುಟ್ಟುವುದು ಸಹಜ. ಕೆಲವೊಮ್ಮೆ ಗಾಳಿ ಸುದ್ದಿಯನ್ನು ಚರ್ಚೆ ಮಾಡ್ತಾರೆ. ಇದಕ್ಕೆಲ್ಲ ಚುನಾವಣೆ ಪ್ರಕ್ರಿಯೆ ಆರಂಭವಾದಾಗ ಉತ್ತರ ಸಿಗಲಿದೆ. ಅಂತಹ ಯಾವುದೇ ಚರ್ಚೆಗಳು ನನ್ನ ಮುಂದೆ ನಡೆದಿಲ್ಲ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular