HomeKarnatakaBIG NEWS: ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ; ತನಿಖೆಗೆ ಆದೇಶ

BIG NEWS: ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ; ತನಿಖೆಗೆ ಆದೇಶ

ಬೆಂಗಳೂರು: ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಪ್ರಕರಣದ ಬಗ್ಗೆ ಅಧಿಕಾರಿಗಳ ವಿಶೇಷ ತಂಡ ರಚಿಸಿ ತನಿಖೆ ನಡೆಸುವಂತೆ ಆದೇಶಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂತಹ ಪ್ರಕರಣ ಮರುಕಳಿಸಬಾರದು. ಒಂದಿಮ್ಮೆ ಈ ರೀತಿ ಘಟನೆ ಮರುಕಳಿಸಿದರೆ ಸಿಇಒಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular