HomeKarnatakaBIG NEWS: DCM ಡಿ.ಕೆ.ಶಿವಕುಮಾರ್ ಭೇಟಿಯಾದ ನಟ ಜಗ್ಗೇಶ್ ದಂಪತಿ

BIG NEWS: DCM ಡಿ.ಕೆ.ಶಿವಕುಮಾರ್ ಭೇಟಿಯಾದ ನಟ ಜಗ್ಗೇಶ್ ದಂಪತಿ

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿ ರಾಜ್ಯಸಭಾ ಸದಸ್ಯರಾಗಿರುವ ಹಿರಿಯ ನಟ ಜಗ್ಗೇಶ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು.

ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ನಟ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳಾ ಜಗ್ಗೇಶ್, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಜಗ್ಗೇಶ್, ಇದೊಂದು ಸಾಮಾನ್ಯ ಭೇಟಿಯಷ್ಟೇ. ಒಬ್ಬ ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ. ಅವರು ಅಧಿಕಾರ ವಹಿಸಿಕೊಂಡಾಗ ನಾನು ಅಮೆರಿಕಾದಲ್ಲಿದ್ದೆ. ಹಾಗಾಗಿ ಈಗ ಬಂದು ಅವರಿಗೆ ಶುಭಾಷಯ ಕೋರಿದ್ದೇನೆ ಎಂದು ಹೆಳಿದರು.

For Latest News Updates, Join Our Whatsapp Community🚩
RELATED ARTICLES

Most Popular