HomeKarnatakaFree Bus Service : ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ : ಮೊದಲ ದಿನ...

Free Bus Service : ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ : ಮೊದಲ ದಿನ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಎಷ್ಟು ಗೊತ್ತಾ..?

ಬೆಂಗಳೂರು : ಶಕ್ತಿ ಯೋಜನೆಗೆ( Free Bus service)  ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಲಕ್ಷಾಂತರ ಮಂದಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ.

ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕೆ ಎಸ್ ಆರ್ ಟಿಸಿಯಲ್ಲಿ 1,93,831 ಮಹಿಳೆಯರು ಪ್ರಯಾಣಿಸಿದ್ದಾರೆ. ಪ್ರಯಾಣದ ಮೌಲ್ಯ ರೂ.58,16,178 ಆಗಿದೆ. ಅದೇ ರೀತಿ ಬಿಎಂಟಿಸಿಯಲ್ಲಿ 2,01,215 ಮಹಿಳೆಯರು ಪ್ರಯಾಣಿಸಿದ್ದಾರೆ. ರೂ.26,19,604 ಪ್ರಯಾಣದ ಮೌಲ್ಯವಾಗಿದೆ . KKRTCಯಲ್ಲಿ 53,623 ಮಂದಿ ಮಹಿಳೆಯರು ಪ್ರಯಾಣಿಸಿದ್ದು ರೂ.19,70,000 ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯವಾಗಿದೆ NWKRTCಯಲ್ಲಿ 1,22,354 ಮಹಿಳೆಯರು ಪ್ರಯಾಣಿಸಿದ್ದು ಅದರ ಮೌಲ್ಯ ರೂ.36,17,096 ಆಗಿದೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಲಕ್ಷಾಂತರ ಮಂದಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಿನ್ನೆ ಭಾನುವಾರ ಸಿಎಂ ಸಿದ್ದರಾಮಯ್ಯ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ ನೀಡಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular