ಬೆಂಗಳೂರು : ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ಮುಂದೆ ಒರಿಜಿನಲ್ ಐಡಿ ಬೇಕಿಲ್ಲ, ನಕಲು ಪ್ರತಿಯಿದ್ದರೂ ಪ್ರಯಾಣಿಸಬಹುದು ಎಂದು ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.
ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ವುರಾವೆಗಾಗಿ ತೋರಿಸಬೇಕಾದ ದಾಖಲಾತಿಗಳಲ್ಲಿ ಮೂಲ ಗುರುತಿನ ಚೀಟಿ ಅಥವಾ ಡಿಜಿಲಾಕರ್(Digilocker) ಮುಖಾಂತರ ಹಾಜರುಪಡಿಸಬೇಕಾಗಿರುತ್ತದೆ ಎಂದು ತಿಳಿಸಲಾಗಿರುತ್ತದೆ. ಅದಾಗ್ಯೂ, ಮಹಿಳಾ ಪ್ರಯಾಣಿಕರ ಅನುಕೂಲಕ್ಕಾಗಿ ಉಲ್ಲೇಖಿತ ಆದೇಶದಲ್ಲಿ ನಮೂದಿಸಿರುವ ಗುರುತಿನ ಚೀಟಿಗಳ ನಕಲು ಪ್ರತಿಯನ್ನು ಸಹ ಮಾನ್ಯ ಮಾಡಲು ನಿರ್ಧರಿಸಿದೆ.
ಮಹಿಳಾ ಪ್ರಯಾಣಿಕರು ತಮ್ಮ ಪ್ರಯಾಣದ ಸಮಯದಲ್ಲಿ ಆದೇಶದಲ್ಲಿ ನಿಗದಿಪಡಿಸಲಾಗಿರುವ ಗುರುತಿನ ಚೀಟಿಗಳ ಮೂಲ/ನಕಲು/ಡಿಜಿಲಾಕರ್ (ಹಾರ್ಡ್ ಮತ್ತು ಸಾಫ್ಟ್ ಕಾಪಿ ) ಮಾದರಿಯಲ್ಲಿ ಹಾಜರುಪಡಿಸಿ ಪುಯಾಣಿಸಲು ಅನುಮತಿಸಿದೆ.ಇನ್ನುಳಿದಂತೆ ಸಾಮಾನ್ಯ ಸ್ಥಾಯಿ ಆದೇಶದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ.