HomeKarnatakaಗಮನಿಸಿ…! ಬೆಂಗಳೂರು ಸೇರಿ ರಾಜ್ಯದಲ್ಲಿ 4 ದಿನ ಭಾರಿ ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಗಮನಿಸಿ…! ಬೆಂಗಳೂರು ಸೇರಿ ರಾಜ್ಯದಲ್ಲಿ 4 ದಿನ ಭಾರಿ ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ನಂತರ ಭಾರಿ ಮಳೆ ಆಗುವ ಸಂಭವ ಇದೆ.

ಅರಬ್ಬಿ ಸಮುದ್ರದಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುವ ಸಂಭವ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಸೇರಿದಂತೆ ಕೆಲವು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular