HomeKarnatakaRain alert Bengaluru : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ‘ಮಳೆ’ ಮುನ್ಸೂಚನೆ...

Rain alert Bengaluru : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬಿಪರ್ ಜಾಯ್ ಚಂಡಮಾರುತದ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಸಂಜೆ ವೇಳೆಗೆ ಭಾರಿ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬೆಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ನಗರದ ಹಲವು ರಸ್ತೆಗಳು ಹಾಗೂ ಅಂಡರ್ ಪಾಸ್ ಗಳು ಜಲಾವೃತವಾಗಿದೆ. ಇದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು.

ಅರಬ್ಬಿ ಸಮುದ್ರದಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುವ ಸಂಭವ ಇದೆ.ಅದೇ ರೀತಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಸೇರಿದಂತೆ ಕೆಲವು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular