ಪುಣೆ: ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ಮಂಗಳವಾರ ತೈಲ ಟ್ಯಾಂಕರ್ ಅಪಘಾತ ಸಂಭವಿಸಿದ್ದು, 4 ಜನರು ಸಾವನ್ನಪ್ಪಿದ್ದಾರೆ ಮತ್ತು 3 ಜನರು ಗಾಯಗೊಂಡಿದ್ದಾರೆ ಎಂದು ಪುಣೆ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.
ರಸ್ತೆಯಲ್ಲಿ ಭಾರಿ ದೊಡ್ಡ ಅಪಘಾತ ಸಂಭವಿಸಿದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದೆ. ರಕ್ಷಣಾ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಲಾಗಿದ್ದು, ಪ್ರಸ್ತುತ ಲೋನಾವಾಲಾ ನಗರದಿಂದ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಗಿದೆ. ಪಲ್ಟಿಯಾದ ಟ್ಯಾಂಕರ್ನಿಂದ ಸುಮಾರು 10 ಅಡಿ ಎತ್ತರದಲ್ಲಿ ಬೆಂಕಿಯ ದೊಡ್ಡ ಜ್ವಾಲೆಗಳು ಹರಡಿದೆ.