HomeKarnatakaBIG NEWS: ಬಿಜೆಪಿ ಹಣ ಪಡೆದು ಕಾಂಗ್ರೆಸ್ ಗೆ ವೋಟ್ ಹಾಕಿದ್ದೀರಾ; ಅಲ್ಲಾ ನಿಮ್ಮನ್ನು ಕ್ಷಮಿಸಲ್ಲ;...

BIG NEWS: ಬಿಜೆಪಿ ಹಣ ಪಡೆದು ಕಾಂಗ್ರೆಸ್ ಗೆ ವೋಟ್ ಹಾಕಿದ್ದೀರಾ; ಅಲ್ಲಾ ನಿಮ್ಮನ್ನು ಕ್ಷಮಿಸಲ್ಲ; ಕಿಡಿಕಾರಿದ ಎಂಟಿಬಿ ನಾಗರಾಜ್

ಬೆಂಗಳೂರು: ವಿಧಾನಸಭಾ ಚುನಾವಣೆಯ ಸೋಲಿನಿಂದ ಹೊರಬರಲಾಗದೇ ಬೇಸರದಲ್ಲಿ ಈವರೆಗೆ ಬಿಜೆಪಿ ನಾಯಕರು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ಎಂಟಿಬಿ ನಾಗರಾಜ್, ಈಗ ಮುಸ್ಲಿಂ ಮತದಾರರ ವಿರುದ್ಧ ಕಿಡಿ ಕಾರಿದ್ದಾರೆ.

ನನ್ನ ಸೋಲಿಗೆ ಡಾ.ಕೆ.ಸುಧಾಕರ್ ಮಾತ್ರವಲ್ಲ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಕಾರಣ ಎಂದು ಈ ಹಿಂದೆ ಆರೋಪಿಸಿದ್ದ ಎಂಟಿಬಿ ನಾಗರಾಜ್, ಈಗ ನನ್ನ ಸೋಲಿಗೆ ಮುಸ್ಲಿಂ ಸಮುದಾಯವೇ ಕಾರಣ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಬಿಜೆಪಿಯ ಹಣ ತೆಗೆದುಕೊಂಡು ಕಾಂಗ್ರೆಸ್ ಗೆ ವೋಟ್ ಹಾಕಿದ್ದೀರಿ. ದಿನಕ್ಕೆ ಮೂರು ಸಲ ನಮಾಜ್ ಮಾಡ್ತೀರಿ. ಖುರಾನ್ ಮೇಲೆ ಪ್ರಮಾಣ ಮಾಡಿದ್ರಿ. ಆದರೆ ಈಗ ನನ್ನ ಬೆನ್ನಿಗೆ ಚೂರಿ ಹಾಕಿದ್ದೀರಾ. ಅಲ್ಲಾ ನಿಮ್ಮನ್ನು ಕ್ಷಮಿಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular