ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ 36 ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ 36 ಕೈ ಮುಖಂಡರ ವಿರುದ್ಧ ಸಮನ್ಸ್ ಜಾರಿ ಮಾಡಿದೆ.
ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.