HomeKarnatakaಹೈಕಮಾಂಡ್ ನಿಲಯದ ಕಲಾವಿದರಿಗೆ ಸರ್ಕಾರದ ಸಭೆ ನಡೆಸುವ ಜವಾಬ್ದಾರಿ ಕೊಟ್ಟವರು ಯಾರು…?: ಹೆಚ್.ಡಿ.ಕೆ. ಪ್ರಶ್ನೆ

ಹೈಕಮಾಂಡ್ ನಿಲಯದ ಕಲಾವಿದರಿಗೆ ಸರ್ಕಾರದ ಸಭೆ ನಡೆಸುವ ಜವಾಬ್ದಾರಿ ಕೊಟ್ಟವರು ಯಾರು…?: ಹೆಚ್.ಡಿ.ಕೆ. ಪ್ರಶ್ನೆ

ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದಾರೆ.

ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular