HomeKarnatakaNPS ನೌಕರರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್: ಬಜೆಟ್ ನಲ್ಲಿ ಹಳೆ ಪಿಂಚಣಿ ಯೋಜನೆ ಮರು...

NPS ನೌಕರರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್: ಬಜೆಟ್ ನಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಘೋಷಣೆ ಬಗ್ಗೆ ಸಂಪುಟದಲ್ಲಿ ತೀರ್ಮಾನ

ಬೆಂಗಳೂರು: ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಹಾಗೂ ವಿವಿಧ ನೌಕರರ ಸಂಘಟನೆಗಳ ಪದಾಧಿಕಾರಿಗಳ ನಿಯೋಗದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಮರು ಜಾರಿಗೆ ಮನವಿ ಮಾಡಲಾಗಿದೆ.

ಇದಕ್ಕೆ ಸ್ಪಂದಿಸಿದ ಸಿಎಂ ನೌಕರರ ನಿಯೋಗದೊಂದಿಗೆ ಮಾತನಾಡಿ, ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಬಜೆಟ್ ನಲ್ಲಿ ಘೋಷಣೆ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು, ಅರ್ಹ ಫಲಾನುಭವಿಗಳಿಗೆ ತಲುಪಿಸಲು ನೌಕರರು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, 2006 ಏಪ್ರಿಲ್ 1 ರಿಂದ ಎನ್.ಪಿ.ಎಸ್. ಜಾರಿಯಾಗಿದ್ದು, 2.98 ಲಕ್ಷ ನೌಕರರು ಎನ್.ಪಿ.ಎಸ್. ವ್ಯಾಪ್ತಿಗೆ ಒಳಪಡುತ್ತಾರೆ. ಪಿಂಚಣಿ ಮೊತ್ತವನ್ನು ಠೇವಣಿ ಇಡಲಾಗಿದ್ದು, ಈ ಮೊತ್ತ ಬಳಸಿಕೊಂಡು ಇವರು ನಿವೃತ್ತಿಯಾಗುವ ವೇಳೆಗೆ ಲಭ್ಯವಾಗುವಂತೆ ಜಿಪಿಎಫ್ ನಲ್ಲಿ ಇಡಬಹುದು ಎಂದು ತಿಳಿಸಿದ್ದಾರೆ.

ರಾಜಸ್ಥಾನ, ಛತ್ತೀಸ್ಗಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಮರು ಜಾರಿ ಮಾಡಲಾಗಿದ್ದು, ಕರ್ನಾಟಕದಲ್ಲಿಯೂ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂದು ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ತೇಜ ಹೇಳಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕೆಪಿಟಿಸಿಎಲ್, ಜಲಮಂಡಳಿ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಲವು ನೌಕರರ ಸಂಘಗಳ ಪ್ರತಿನಿಧಿಗಳು ನಿಯೋಗದಲ್ಲಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular