HomeKarnatakaಸಾಕ್ಷ್ಯಗಳಿಲ್ಲದೆ ದೂರು ದಾಖಲಿಸಿದರೆ ಸ್ವಾತಂತ್ರ್ಯದ ಉಲ್ಲಂಘನೆ: ಹೈಕೋರ್ಟ್ ಆದೇಶ

ಸಾಕ್ಷ್ಯಗಳಿಲ್ಲದೆ ದೂರು ದಾಖಲಿಸಿದರೆ ಸ್ವಾತಂತ್ರ್ಯದ ಉಲ್ಲಂಘನೆ: ಹೈಕೋರ್ಟ್ ಆದೇಶ

ಬೆಂಗಳೂರು: ಸಾಕ್ಷ್ಯಗಳಿಲ್ಲದೆ ದೂರು ದಾಖಲಿಸುವುದು ಸ್ವಾತಂತ್ರ್ಯಹರಣವಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಅಪರಾಧ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತುಪಡಿಸುವಂತಹ ಸಾಕ್ಷಗಳಿಲ್ಲದೆ ದೂರು ದಾಖಲಿಸಿದಾಗ ಅದು ಸಂವಿಧಾನದ 21ನೇ ಪರಿಚ್ಛೇದ ಕಲ್ಪಿಸಿದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಆಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾರಾಷ್ಟ್ರ ನಿವಾಸಿ ವಿಫಲ್ ಪ್ರಕಾಶ್ ಪಾಟೀಲ್ ಅವರು ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಚಿಕ್ಕೋಡಿ ಠಾಣೆ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಸಾಕ್ಷಗಳಿಲ್ಲದೆ ದೂರು ದಾಖಲು ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular