ಬೆಂಗಳೂರು : ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ಬಿಟ್ ಕಾಯಿನ್ ಪ್ರಕರಣವನ್ನು ಮರು ಪರಿಶೀಲನೆ ಮಾಡುತ್ತೇವೆ. ರಾಜ್ಯದಲ್ಲಿ ನಮ್ಮ ಸರ್ಕಾರ ಬಂದು 20 ದಿನ ಆಗಿದೆ. ಬಿಜೆಪಿಯವರು ಸ್ವಲ್ಪ ಸಮಾಧಾನವಾಗಿದ್ದರೆ ಒಳ್ಳೆಯದು ಎಂದು ಹೇಳಿದರು. ನಿನ್ನೆ ನನ್ನ ಹೇಳಿಕೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅವರು ಹೇಳಿದರು.
ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ , ಅಷ್ಟಕ್ಕೆ ಬಿಜೆಪಿಯವರು ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ಸ್ವಲ್ಪ ದಿನ ಸಮಾಧಾನದಿಂದಿರಿ, ನಾವು ಎಲ್ಲಾ ಪ್ರಕರಣವನ್ನು ಮರು ತನಿಖೆ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣಗಳಿಗೆ ಮರುಜೀವ ಬರಲಿದೆ. ಕಾಂಗ್ರೆಸ್ಗೆ ಮಹಾ ಅಸ್ತ್ರವಾಗಿರುವ ಬಿಟ್ ಕಾಯಿನ್, ಪಿಎಸ್ಐ, ಟೆಂಡರ್ ಸ್ಕ್ಯಾಮ್ಗಳು ರೀ ಓಪನ್ ಆಗಲಿದೆ.
You Might Also Like
TAGGED:g parameshar