HomeKarnatakaBIG NEWS: ಸಂಸದ ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆ ಇಲ್ಲ ಎಂದು ತಿರುಗೇಟು ನೀಡಿದ...

BIG NEWS: ಸಂಸದ ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆ ಇಲ್ಲ ಎಂದು ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಭೆ ವಿಚಾರವಾಗಿ ಬಿಜೆಪಿ ನಾಯಕರ ವಾಗ್ದಾಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಿನ್ನೆ ಅಧಿಕೃತವಾಗಿ ಸಭೆ ನಡೆದಿಲ್ಲ. ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚಿಸಲು ಶಾಸಕರನ್ನು ಕರೆದಿದ್ದರು. ಬೆಂಗಳೂರು ನಗರ ಸಂಬಂಧ ಸಭೆ ಕರೆಯಲಾಗಿತ್ತು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ರಾಜ್ಯಪಾಲರಿಗೆ ದೂರು ಕೊಡುವುದಾದರೆ ಕೊಡಲಿ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್, ಬಿಜೆಪಿಯಿಂದ ಹೊಂದಾಣಿಕೆ ರಾಜಕಾರಣ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಹೊಂದಾಣಿಕೆ ರಾಜಕಾರಣ ಮಾಡುತ್ತಿರುವುದು ಯಾರು? ನಾನು ವಿರೋಧ ಪಕ್ಷದವರ ಜೊತೆ ರಾಜಕೀಯವಾಗಿ ಮಾತನಾಡುವುದಿಲ್ಲ. ತನಿಖೆ ಮಾಡಿಸಿ ಅಂತ ಪ್ರತಾಪ್ ಸಿಂಹ ಹೇಳಿದ್ನಾ ? ಸಂಸದ ಪ್ರತಾಪ್ ಸಿಂಹ ಎಳಸು, ಪ್ರತಾಪ್ ಸಿಂಹಗೆ ರಾಜಕೀಯ ಪ್ರಬುದ್ಧತೆ ಇಲ್ಲ. ಮೈಸೂರು-ಬೆಂಗಳೂರು ಹೈವೆ ಮಾಡಿಸಿದ್ದು ನಾನೇ ಅಂತಾರೆ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

Most Popular