HomeKarnatakaBIG NEWS: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಭೇಟಿಗೆ ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

BIG NEWS: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಭೇಟಿಗೆ ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ ಹಿರಿಯರು, ದೂರದ ಸಂಬಂಧಿಯೂ ಹೌದು. ಈ ಹಿಂದೆಯೂ ಹಲವು ಬಾರಿ ನಮ್ಮ ಮನೆಯಲ್ಲಿ ಭೇಟಿಯಾಗಿದ್ದೇವೆ. ಶಾಸಕ ಶಾಮನೂರು ಭೇಟಿಗೆ ರಾಜಕಾರಣ ಬೆರೆಸುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಗ್ಗಾಂವಿಯಿಂದ ಬರುವಾಗ ಹೋಟೆಲ್ ಗೆ ನಾನು ಊಟಕ್ಕೆ ಹೋಗಿದ್ದೆ. ಶಾಮನೂರು, ಮೊಮ್ಮಕ್ಕಳ ಹೊಸ ಸಂಬಂಧ ಬಗ್ಗೆ ಚರ್ಚಿಸಲು ಸೇರಿದ್ದರು. ಆಗ 10 ನಿಮಿಷ ಉಭಯ ಕುಶಲೋಪರಿಯ ಮಾತುಕತೆಯಾಗಿದೆ. ಶಾಮನೂರು ಜೊತೆ ಯಾವುದೇ ರಾಜಕೀಯ ವಿಷಯ ಪ್ರಸ್ತಾಪವಾಗಿಲ್ಲ. ಸ್ನೇಹ ಸಂಬಂಧವೇ ಬೇರೆ. ರಾಜಕೀಯ ಸಂಬಂಧವೇ ಬೇರೆ. ನನ್ನ ರಾಜಕೀಯ ನಿಲುವಿನಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular