HomeIndiaBIG NEWS: 24 ಗಂಟೆಯಲ್ಲಿ 100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

BIG NEWS: 24 ಗಂಟೆಯಲ್ಲಿ 100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ. ಆದರೆ ಮೊನ್ನೆಗಿಂತ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ನೂರಕ್ಕು ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. 24ಗಂಟೆಯಲ್ಲಿ 120 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 531892 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣಗಳು ಕೂಡ ಕಡಿಮೆಯಾಗಿದ್ದು, ದೇಶದಲ್ಲಿ 2148 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44459040 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 469 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,31,715 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 80,912 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular