ಬೆಂಗಳೂರು :ಜುಲೈ 1 ರಿಂದ ಅನ್ನಭಾಗ್ಯ ಯೋಜನೆ (Annabhagya Scheme) ಜಾರಿ ಮಾಡುತ್ತೇವೆ. ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ (Ration card holders) 10 ಕೆಜಿ ಉಚಿತ ಅಕ್ಕಿ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಾವು ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ, ಒಂದು ಘೋಷಣೆ ಜಾರಿ ಮಾಡಿದ್ದೇವೆ. ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ.
ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. 5 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆಗೆ 2,28,000 ಮೆಟ್ರಿಕ್ ಟನ್ ಅಕ್ಕಿ ಬೇಕಾಗುತ್ತದೆ. ಜುಲೈ 10 ರಿಂದ ಪ್ರತಿ ತಿಂಗಳು ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ.ಉಚಿತ ಅಕ್ಕಿ ವಿತರಣೆಯಿಂದ ತಿಂಗಳಿಗೆ 840 ಕೋಟಿ ರೂ. ನಷ್ಟವಾಗಲಿದೆ. ವರ್ಷಕ್ಕೆ 10 ಸಾವಿರದ 92 ಕೋಟಿ ರೂ. ನಷ್ಟವಾಗಲಿದೆ ಎಂದು ತಿಳಿಸಿದ್ದಾರೆ.