HomeKarnatakaದಂಪತಿ ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ಪರಸ್ಪರ ಸಮ್ಮತಿ ವಿಚ್ಛೇದನ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ದಂಪತಿ ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ಪರಸ್ಪರ ಸಮ್ಮತಿ ವಿಚ್ಛೇದನ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ದಂಪತಿಗೆ ಪರಸ್ಪರ ಸಮ್ಮತಿಯ ವಿಚ್ಛೇದನ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.

ವಿಚ್ಛೇದನ ಕೋರಿ ದಂಪತಿ ಕೋರ್ಟ್ ಮೆಟ್ಟಿಲೇರಿದ್ದರು. ಪರಸ್ಪರ ಒಪ್ಪಿಗೆಯ ವಿಚ್ಛೇದನ ನೀಡುವಂತೆ ಮನವಿ ಮಾಡಿದ್ದರು. ಆದರೆ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಒಂದೇ ಮನೆಯಲ್ಲಿ ಪತಿ, ಪತ್ನಿ ವಾಸವಾಗಿದ್ದ ಕಾರಣಕ್ಕೆ ಸಮ್ಮತಿಯ ವಿಚ್ಛೇದನ ನೀಡಲು ಕೌಟುಂಬಿಕ ನ್ಯಾಯಾಲಯ ನಿರಾಕರಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪತಿ-ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವೈಮನಸ್ಯ ಹೊಂದಿದ ದಂಪತಿ ಸಾಮಾನ್ಯವಾಗಿ ಕಿತ್ತಾಡಿಕೊಳ್ಳುತ್ತಾರೆ. ವೈಮನಸ್ಯ ಇದ್ದರೂ ಒಂದೇ ಮನೆಯಲ್ಲಿರುವುದು ಅವರ ಸುಸಂಸ್ಕೃತಿ ತೋರುತ್ತದೆ. ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ವಿಚ್ಛೇದನ ನಿರಾಕರಿಸುವಂತಿಲ್ಲ ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular