HomeKarnatakaಮಕ್ಕಳು ಸಿಎಎ ಕಾಯ್ದೆ ನಾಟಕ ಪ್ರದರ್ಶಿಸಿದ್ದಕ್ಕೆ ಶಾಲೆ ವಿರುದ್ಧ ದಾಖಲಿಸಿದ್ದ ರಾಷ್ಟ್ರದ್ರೋಹ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಮಕ್ಕಳು ಸಿಎಎ ಕಾಯ್ದೆ ನಾಟಕ ಪ್ರದರ್ಶಿಸಿದ್ದಕ್ಕೆ ಶಾಲೆ ವಿರುದ್ಧ ದಾಖಲಿಸಿದ್ದ ರಾಷ್ಟ್ರದ್ರೋಹ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಕಲಬುರಗಿ: ಸಿಎಎ, ಎನ್.ಆರ್.ಸಿ. ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಆರೋಪ ಹಿನ್ನೆಲೆಯಲ್ಲಿ ಬೀದರ್ ಶಾಹಿನ್ ಶಾಲೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧದ ರಾಷ್ಟ್ರದ್ರೋಹದ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.

ಹೈಕೋರ್ಟ್ ಕಲಬುರ್ಗಿ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರು ಆದೇಶಿಸಿದ್ದಾರೆ. 2020 ರಲ್ಲಿ ಸಿಎಎ, ಎನ್.ಆರ್.ಸಿ. ಕಾಯ್ದೆ ವಿರೋಧಿಸಿ ಬೀದರ್ ಶಾಹಿನ್ ಶಾಲೆಯ 4, 5, 6ನೇ ತರಗತಿ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ನಡೆಸಲಾಗಿತ್ತು. ಶಾಲೆಯ ಆಡಳಿತ ಮಂಡಳಿ ವಿರುದ್ಧ ರಾಷ್ಟ್ರದ್ರೋಹದ ಕೇಸ್ ದಾಖಲಿಸಲಾಗಿತ್ತು. ಪ್ರಕರಣ ರದ್ದು ಮಾಡುವಂತೆ ಕೋರಿ ಅಲ್ಲಾವುದ್ದೀನ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ರಾಷ್ಟ್ರದ್ರೋಹದ ಪ್ರಕರಣ ರದ್ದುಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular