
ಕಳೆದ ಡಿಸೆಂಬರ್ ನಲ್ಲಿ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಭೀಕರ ಕಾರು ಅಪಘಾತಕ್ಕೊಳಗಾಗಿದ್ದ ಪಂತ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿ ಪಡೆಯುತ್ತಿದ್ದಾರೆ. ತಾವು ಸುಧಾರಿಸುತ್ತಿರುವ ಬಗ್ಗೆ ಆಗಾಗ್ಗೆ ಅಭಿಮಾನಿಗಳಿಗೆ ಅಪ್ ಡೇಟ್ ಕೊಡುವ ಪಂತ್ ಇದೀಗ ವಿಡಿಯೋವೊಂದನ್ನ ಹಂಚಿಕೊಂಡಿದ್ದು ಅದರಲ್ಲಿ ಅವರು ಸ್ವಯಂಬಲದಿಂದ ಆರಾಮವಾಗಿ ಮೆಟ್ಟಿಲು ಹತ್ತುತ್ತಿದ್ದಾರೆ.
ವಿಡಿಯೋಗೆ ಡೆಲ್ಲಿ ಕ್ಯಾಪಿಟಲ್ಸ್, ಪಂತ್ ಸಹೋದರಿ ಸಾಕ್ಷಿ ಪಂತ್, ಭಾರತ ಮಹಿಳಾ ತಂಡದ ಆಲ್ರೌಂಡರ್ ಹರ್ಲೀನ್ ಡಿಯೋಲ್ ಸೇರಿದಂತೆ ಹಲವರು ಪ್ರತಿಕ್ರಿಯಿಸಿದ್ದು ಶೀಘ್ರವೇ ಸಂಪೂರ್ಣ ಗುಣಮುಖರಾಗಿ ವಾಪಸ್ ಮರಳುವಂತೆ ಶುಭ ಕೋರಿದ್ದಾರೆ.

