ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರತಿ ತಿಂಗಳು ಮನೆಯೊಡತಿಗೆ 2 ಸಾವಿರ ರೂ. ಹಣ ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ (ಜೂನ್ 16) ನಾಳೆಯಿಂದ ಆರಂಭವಾಗಲಿದೆ.
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಯೋಜನೆ ಇದಾಗಿದ್ದು, ಆಗಸ್ಟ್ 15ರ ಬಳಿಕ ಜಾರಿಯಾಗಲಿದೆ. ಜೂನ್ 16 ರಿಂದ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ.
ಎಲ್ಲಿ ಅರ್ಜಿ ಸಲ್ಲಿಸಬಹುದು
ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು.
ಯಾವೆಲ್ಲಾ ದಾಖಲೆಗಳು ಬೇಕು..?
1) ರೇಷನ್ ಕಾರ್ಡ್
2. ಬ್ಯಾಂಕ್ ಪಾಸ್ಬುಕ್
3. ಆಧಾರ್ ಕಾರ್ಡ್
4. ಯಾವುದಾದರೂ ಗುರುತಿನ ಚೀಟಿ
ಗೃಹಲಕ್ಷ್ಮೀ ಯೋಜನೆಯಡಿ 2,000 ರೂ. ಪಡೆಯಲು ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ಇರಲೇಬೇಕು. ಲಾಭ ಪಡೆಯಲು ಮನೆಯೊಡತಿಯ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಅನ್ನು ಜೋಡಣೆ ಮಾಡಿರಲೇಬೇಕು. ಯೋಜನೆಯ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ