
ಗುಜರಾತ್ ನ ಮಾಂಡವಿ ಬಳಿ ಬಿಪರ್ ಜಾಯ್ ನೆಲಕ್ಕೆ ಅಪ್ಪಳಿಸಲಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಇಂದು 9 ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.
ಗುಜರಾತ್, ಮಹಾರಾಷ್ಟ್ರ ಕರಾವಳಿ ಪ್ರದೇಶದಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗಿದ್ದು, ಮುಂಜಾಗೃತಾ ಕ್ರಮವಾಗಿ 70,000 ಜನರನ್ನು ಸ್ಥಳಾಂತರ ಮಾಡಲಾಗಿದೆ. ಈಗಾಗಲೇ 100-120 ಕೀ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. 33 ಎನ್ ಡಿ ಆರ್ ಎಫ್ ತಂಡ ನಿಯೋಜನೆ ಮಾಡಲಾಗಿದೆ. ಇನ್ನು ಗುಜರಾತ್ ನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

