
ಚಂಡಮಾರುತದ ಪರಿಣಾಮ ಕರಾವಳಿ ಭಾಗದಲ್ಲಿ ಅರಬ್ಬಿ ಸಮುದ್ರದ ಬೃಹತ್ ಅಲೆಗಳು ಅಪ್ಪಳಿಸುತ್ತಿದ್ದು, ದಕ್ಷಿಣ ಕನ್ನಡ, ಮಂಗಳೂರು, ಉಡುಪಿ ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.
ಮಂಗಳೂರು ಹೊರವಲಯದ ಸುರತ್ಕಲ್ ಸಮುದ್ರ ತೀರದಲ್ಲಿ ಅಲೆಗಳ ಆರ್ಭಟ ಜೋರಾಗಿದ್ದು, ಕಟ್ಟಡಗಳು, ಮನೆಗಳಿಗೆ ಗಜಗಾತ್ರದ ಅಲೆಗಳು ಅಪ್ಪಳಿಸುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಗೋಕರ್ಣ ಕಡಲ ತೀರದಲ್ಲಿಯೂ ಸಮುದ್ರದ ಅಲೆಗಳು ಹೆಚ್ಚುತ್ತಿದ್ದು, ಬಿರುಗಾಳಿ ಸಹಿತ ಮಳೆಯಾಗುತ್ತಿದೆ.

