ಬೆಂಗಳೂರು : ‘ಬಿಪರ್ ಜಾಯ್ ಸೈಕ್ಲೋನ್’ ಪರಿಣಾಮ ಮುಂದಿನ ಜೂನ್ 19 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು. ಬೆಂಗಳೂರು. ಬೆಂಗಳೂರು ಗ್ರಾಮಾಂತರ. ಚಾಮರಾಜನಗರ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ,ಮೈಸೂರು, ಮಂಡ್ಯ ಸೇರಿ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಹಲವು ಕಡೆ ಮುಂದಿನ 5 ದಿನ ಭಾರಿ ಮಳೆಯಾಗಲಿದ್ದು, 60 ರಿಂದ 65 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ವಾಹನ ಸವಾರರು, ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ ನೀಡಲಾಗಿದೆ.