HomeKarnatakaವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಲವ್ವಿಡವ್ವಿ: ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಲವ್ವಿಡವ್ವಿ: ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ತುಮಕೂರು : ವಿದ್ಯಾರ್ಥಿನಿ ಜೊತೆ ಉಪನ್ಯಾಸಕ ಲವ್ವಿಡವ್ವಿ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.

ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲೇ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಉಪನ್ಯಾಸಕ ರಂಗನಾಥ್ ವಿದ್ಯಾರ್ಥಿನಿಗೆ ಸಲುಗೆಯಿಂದ ಮೆಸೇಜ್ ಮಾಡಿದ್ದಾನೆ. ಹಾಗೂ ವಿದ್ಯಾರ್ಥಿನಿ ಜೊತೆ ಕಾರಿನಲ್ಲಿ ಸುತ್ತಾಟ ನಡೆಸಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿ ಜೊತೆ ಇರುವ ಶಿಕ್ಷಕನ ಫೋಟೋ ಕೂಡ ವೈರಲ್ ಆಗಿದ್ದು, ಈ ಹಿನ್ನೆಲೆ ಮಕ್ಕಳು ಉಪನ್ಯಾಸಕನನ್ನು ತರಗತಿಯಲ್ಲಿ ಕೂಡಿಹಾಕಿ ಪ್ರತಿಭಟನೆ ನಡೆಸಿದ್ದಾರೆ. ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular