HomeKarnatakaBIG NEWS: ಬಿಜೆಪಿ ಸರ್ಕಾರದ ಅವಧಿಯ ಬಹುತೇಕ ಕಾಯ್ದೆಗೆ ಕೊಕ್; ಹಲವು ಮಹತ್ವದ ಕಾಯ್ದೆ ರದ್ದುಪಡಿಸಲು...

BIG NEWS: ಬಿಜೆಪಿ ಸರ್ಕಾರದ ಅವಧಿಯ ಬಹುತೇಕ ಕಾಯ್ದೆಗೆ ಕೊಕ್; ಹಲವು ಮಹತ್ವದ ಕಾಯ್ದೆ ರದ್ದುಪಡಿಸಲು ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಹಲವು ಮಹತ್ವದ ಕಾಯ್ದೆಗಳಿಗೆ ಕೊಕ್ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹರಗಳ ಸಚಿವ ಹೆಚ್.ಕೆ.ಪಾಟೀಲ್, ಹಲವು ಕಾಯ್ದೆಗಳನ್ನು ರದ್ದು ಮಾಡಲು ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಎಪಿಎಂಸಿ ಕಾಯ್ದೆ ರದ್ದತಿಗೂ ತೀರ್ಮಾನಿಸಲಾಗಿದೆ. ಅಲ್ಲದೇ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಅಧಿನಿಯಮ ರದ್ದುಗೊಳಿಸಲು ಸಂಪುಟ ಸಮ್ಮತಿ ನೀಡಿದೆ ಎಂದು ಹೇಳಿದರು.

ಅಲ್ಲದೇ ಗಂಗಾ ಕಲ್ಯಾಣ ಯೋಜನೆ ಅಕ್ರಮ, ಪಿಎಸ್ ಐ ಹಗರಣ ತನಿಖೆಗೆ ವಿಶೇಷ ತಂಡ ರಚನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular