alex Certify ಕಲ್ಯಾಣ ಮಂಟಪದಲ್ಲಿ ಮದುವೆ ಸಂಭ್ರಮದಲ್ಲಿದ್ದವರಿಗೆ ಶಾಕ್: 8 ಲಕ್ಷ ರೂ. ಚಿನ್ನ ದೋಚಿದ ಅಪರಿಚಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಮಂಟಪದಲ್ಲಿ ಮದುವೆ ಸಂಭ್ರಮದಲ್ಲಿದ್ದವರಿಗೆ ಶಾಕ್: 8 ಲಕ್ಷ ರೂ. ಚಿನ್ನ ದೋಚಿದ ಅಪರಿಚಿತ

ಬೆಂಗಳೂರು: ಕಲ್ಯಾಣ ಮಂಟಪಕ್ಕೆ ನುಗ್ಗಿದ ಅಪರಿಚಿತ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದು, ಮದುವೆ ಸಂಭ್ರಮದಲ್ಲಿದ್ದವರಿಗೆ ಶಾಕ್ ಆಗಿದೆ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಜರಾಜೇಶ್ವರಿ ಕಲ್ಯಾಣ ಮಂಟಪಕ್ಕೆ ನುಗ್ಗಿದ ಅಪರಿಚಿತ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಒಡವೆ ಕಳೆದುಕೊಂಡ ಕುಟುಂಬದವರು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಕಲ್ಯಾಣ ಮಂಟಪಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿನ್ನಾಭರಣ ದೋಚಿದ ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...