ಬೆಂಗಳೂರು : ನನ್ನ ಜೀವಮಾನದಲ್ಲೇ ಹೊಂದಾಣಿಕೆಯ ರಾಜಕೀಯ ಮಾಡಿಲ್ಲ’ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಈ ವಿಚಾರಕ್ಕೆ ಕಾಂಗ್ರೆಸ್ ಟ್ವೀಟ್ ಮೂಲಕ ಟಾಂಗ್ ನೀಡಿದೆ.
ಜೋಶಿ, ಸಂತೋಷ್ ಅವರುಗಳು ಪ್ರತಾಪ್ ಸಿಂಹಹೆಗಲ ಮೇಲೆ ಗನ್ನಿಟ್ಟು ಶೂಟ್ ಮಾಡಿದ ಗುಂಡು ಬೊಮ್ಮಾಯಿ
ಅವರ ಎದೆಗೆ ತಗುಲಿದೆ! ಸಿಎಂ ಆದರೂ ಬಿಜೆಪಿಯ ಗರ್ಭಗುಡಿಯ ಒಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿಯವರೇ ಜೋಶಿ ಸಂತೋಷರ ಮುಂದಿನ ಟಾರ್ಗೆಟ್! ಬೊಮ್ಮಾಯಿಯವರನ್ನು ಮುಗಿಸಿದರೆ “ಟಾರ್ಗೆಟ್ ಲಿಂಗಾಯತ” ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದಂತಾಗುತ್ತದೆ! ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕುಹಕವಾಡಿದೆ.