ಬೆಂಗಳೂರು : ಲೋಕಸೇವಾ ಆಯೋಗದ(KPSC) ವಿವಿಧ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ಇಂದು ಆಯೋಗ ಪ್ರಕಟಗೊಳಿಸಿದೆ.
ಗ್ರೂಪ್ ‘ಸಿ’ ತಾಂತ್ರಿಕೇತರ ವೃಂದದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು 72 ಹೈ,ಕ ಹುದ್ದೆಗಳಿಗೆ ದಿನಾಂಕ:05-05-2023ರಂದು ತಾತ್ಕಾಲಿಕ ಆಯ ಪಟ್ಟಿಯನ್ನು ಪ್ರಕಟಿಸಿ, ಸದರಿ ಆಯ್ಕೆಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು 07 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಆಯ್ಕೆಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಇದೀಗ ಪ್ರಕಟಿಸಿದೆ.