ಬೆಂಗಳೂರು: ಸರ್ಕಾರದಿಂದ ಮದ್ಯದ ದರ ಹೆಚ್ಚಳ ಮಾಡಿಲ್ಲ. ಈ ಕುರಿತಾಗಿ ಯಾವುದೇ ಅಧಿಕೃತ ಆದೇಶ ಕೂಡ ಹೊರಡಿಸಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ಯದ ದರ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ. ಒಂದು ವೇಳೆ ಮದ್ಯದ ದರ ಹೆಚ್ಚಳ ಮಾಡಿದರೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
ಇದುವರೆಗೂ ನನಗೆ ತಿಳಿದಿರುವಂತೆ ಅಬಕಾರಿ ಇಲಾಖೆಯಿಂದ ಮದ್ಯದ ಹೆಚ್ಚಳ ಮಾಡಿಲ್ಲ. ಈ ಬಗ್ಗೆ ಪರಿಶೀಲಿಸಿ ತಿಳಿಸುತ್ತೇವೆ ಎಂದ ಅವರು, ಕಳೆದ ಒಂದು ವಾರದಿಂದ ಬಿಯರ್ ದರ 20 ರೂಪಾಯಿ ಹೆಚ್ಚಳವಾಗಿದೆ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಿ, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.