HomeKarnatakaಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಹತ್ಯೆಗೀಡಾದವರ ನಾಲ್ವರು ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ಕಳೆದ ವರ್ಷ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮಹಮ್ಮದ್ ಫಾಝೀಲ್ ಹಾಗೂ ಡಿಸೆಂಬರ್ 24ರಂದು ಕಾಟಿಪಾಳ್ಯದ ಅಬ್ದುಲ್ ಜಲೀಲ್, 2018ರ ಜನವರಿ 3ರಂದು ಕಾಟಿಪಾಳ್ಯದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಾಲ್ವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಕಾಂಗ್ರೆಸ್ ಹಾಗೂ ಮುಸ್ಲಿಂ ಸಂಘಟನೆಗಳು ಒತ್ತಾಯಿಸಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular