HomeAgricultureಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ 8 ಕೆಜಿ ಅಕ್ಕಿ, 2 ಕೆಜಿ ರಾಗಿ,...

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ 8 ಕೆಜಿ ಅಕ್ಕಿ, 2 ಕೆಜಿ ರಾಗಿ, ಜೋಳ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ 8 ಕೆಜಿ ಅಕ್ಕಿ ಜತೆಗೆ ಎರಡು ಕೆಜಿ ರಾಗಿ ಅಥವಾ ಜೋಳ ವಿತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಕೆಡಿಪಿ ಸಭೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಹೇಳಿದ್ದು, ಜುಲೈ 1ರಿಂದಲೇ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

8 ಕೆಜಿ ಅಕ್ಕಿ ಜತೆಗೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಎರಡು ಕೆಜಿ ರಾಗಿ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಎರಡು ಕೆಜಿ ಜೋಳ ವಿತರಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಯಾವುದೇ ಅಡಚಣೆ ಎದುರಾದರೂ ಅನ್ನಭಾಗ್ಯ ಯೋಜನೆ ಜಾರಿಗೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular