HomeKarnatakaಸಾಕ್ಷ್ಯ ಕೊರತೆಯಿಂದ ಧರ್ಮಸ್ಥಳದ ಸೌಜನ್ಯಾ ಕೊಲೆ ಆರೋಪಿ ಖುಲಾಸೆ: ಸಿಬಿಐ ತನಿಖೆಯಿಂದ ನ್ಯಾಯ ಸಿಗುವ ಭರವಸೆ:...

ಸಾಕ್ಷ್ಯ ಕೊರತೆಯಿಂದ ಧರ್ಮಸ್ಥಳದ ಸೌಜನ್ಯಾ ಕೊಲೆ ಆರೋಪಿ ಖುಲಾಸೆ: ಸಿಬಿಐ ತನಿಖೆಯಿಂದ ನ್ಯಾಯ ಸಿಗುವ ಭರವಸೆ: ತಾಯಿ ಕುಸುಮಾವತಿ

ಬೆಂಗಳೂರು: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ದೋಷಮುಕ್ತಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.

ಉಜಿರೆಯ ಎಸ್‌.ಡಿ.ಎಂ. ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಸೌಜನ್ಯಾ ಮೃತದೇಹ 2012ರ ಅ. 10ರಂದು ಮಣ್ಣಸಂಕ ಪ್ರದೇಶದ ಪೊದೆಯಲ್ಲಿ ಪತ್ತೆಯಾಗಿತ್ತು. ಆಕೆಯ ಮೇಲೆ ದೌರ್ಜನ್ಯ ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ಸಂತೋಷ್ ರಾವ್ ನನ್ನು ಪೊಲೀಸರು ಬಂಧಿಸಿದ್ದರು. ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಧೀಶರಾದ ಸಿ.ಬಿ. ಸಂತೋಷ್ ಅವರು, ಆರೋಪಿ ಕೃತ್ಯವೆಸಗಿರುವುದನ್ನು ರುಜುವಾತುಪಡಿಸುವ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ 6ನಿರ್ದೋಷಿ ಎಂದು ಆದೇಶ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸೌಜನ್ಯಾ ತಾಯಿ ಕುಸುಮಾವತಿ ಅವರು, ಸಿಬಿಐ ಮತ್ತೆ ತನಿಖೆ ನಡೆಸಿ ಆರೋಪಿಗಳು ಯಾರೆಂದು ಪತ್ತೆ ಹಚ್ಚಿ ನಮಗೆ ನ್ಯಾಯ ಕೊಡಿಸಲಿ. ಸಿಬಿಐ ತನಿಖೆಯಿಂದ ನಮಗೆ ನ್ಯಾಯ ಸಿಗುವ ಭರವಸೆ ಇದ್ದು, ಮುಂದೆಯೂ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಾವು ಮೊದಲಿನಿಂದಲೂ ಸಂತೋಷ್ ರಾವ್ ಆರೋಪಿ ಎಲ್ಲ ಎಂದು ಹೇಳುತ್ತಿದ್ದೇವೆ. 10 ವರ್ಷದಿಂದ ಆತ ಆರೋಪಿಯಲ್ಲ ಎಂದು ಹೇಳುತ್ತಿದ್ದೇವೆ. ನಿಜವಾದ ಆರೋಪಿಗಳು ಯಾರು ಎಂದು ಸಿಬಿಐ ತನಿಖೆಯಿಂದ ಗೊತ್ತಾಗುತ್ತದೆ. ಈ ನಿಟ್ಟಿನಲ್ಲಿ ತನಿಖೆ ನಡೆಯಲಿ. ನಾವು ಮೂರ್ನಾಲ್ಕು ಜನರ ಹೆಸರು ನೀಡಿದ್ದೆವು. ಅವರ ಬಗ್ಗೆ ತನಿಖೆ ಮಾಡಲಿ. ನಾವು ಹೆಸರು ಹೇಳಿರುವವರು ತಪ್ಪು ಮಾಡದಿದ್ದರೆ ಯಾಕೆ ತಡೆಯಾಜ್ಞೆ ತಂದಿದ್ದಾರೆ? ಸಿಬಿಐ ಅಧಿಕಾರಿಗಳು ನಾವು ಹೆಸರು ಹೇಳಿರುವವರ ಬಗ್ಗೆ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular