ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ತೀವ್ರ ಬಿಸಿಲಿಗೆ 24 ಗಂಟೆಯಲ್ಲಿ 34 ಮಂದಿ ಸಾವು

ಲಖ್ನೋ: ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಬಿಸಿಲಿಗೆ ಕನಿಷ್ಠ 34ಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಆರೋಗ್ಯ ಅಧಿಕಾರಿಗಳು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಮುಖ್ಯ ವೈದ್ಯಾಧಿಕಾರಿ(ಸಿಎಂಒ) ಡಾ.ಜಯಂತ್ ಕುಮಾರ್ ಮಾತನಾಡಿ, ಜಿಲ್ಲೆಯು ತೀವ್ರ ಬಿಸಿಲಿನಿಂದ ತತ್ತರಿಸುತ್ತಿದೆ. ಜನರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.

ಎರಡು ದಿನದಲ್ಲಿ 34 ಮಂದಿ ಸಾವನ್ನಪ್ಪಿದ್ದು, ಜೂ.15ರಂದು 23 ಮಂದಿ ಹಾಗೂ ಜೂ.16ರಂದು 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ ಅವರು, ಆಸ್ಪತ್ರೆಗೆ ದಾಖಲಾಗಿರುವ ಮೃತರೆಲ್ಲರೂ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇದರೊಂದಿಗೆ, ವಯಸ್ಸಾದವರಿಗೆ ಬಿಸಿಲಿನ ತಾಪವನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ(ಸಿಎಂಎಸ್) ದಿವಾಕರ್ ಸಿಂಗ್ ಮಾತನಾಡಿ, ರೋಗಿಗಳು ಮತ್ತು ಸಿಬ್ಬಂದಿಗೆ ವಿಶ್ರಾಂತಿ ನೀಡಲು ಮತ್ತು ಶಾಖದ ಹೊಡೆತದ ಅಪಾಯವನ್ನು ತಡೆಗಟ್ಟಲು ಆಸ್ಪತ್ರೆಯಲ್ಲಿ ಫ್ಯಾನ್‌ಗಳು, ಕೂಲರ್‌ಗಳು ಮತ್ತು ಏರ್ ಕಂಡಿಷನರ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ. ಹೀಟ್ ಸ್ಟ್ರೋಕ್ ತಡೆಗಟ್ಟಲು ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಜನರಿಗೆ ಸಲಹೆ ನೀಡಿದ್ದಾರೆ.

ಬಲ್ಲಿಯಾ ಜೊತೆಗೆ ಇಡೀ ಮಧ್ಯ ಮತ್ತು ಪೂರ್ವ ಉತ್ತರ ಪ್ರದೇಶವು ಭಾರಿ ಬಿಸಿಲಿನಿಂದ ತತ್ತರಿಸುತ್ತಿದೆ. ಭಾರತೀಯ ಹವಾಮಾನ ದತ್ತಾಂಶ(IMD) ಬಲ್ಲಿಯಾದಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 42.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಸಾಮಾನ್ಯಕ್ಕಿಂತ 4.7 ಡಿಗ್ರಿ ಹೆಚ್ಚಿದೆ ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read