HomeKarnatakaBIG NEWS: ಕಳೆದ ಬಾರಿಯ ಸೋಲಿನ ಕಾರಣ ಬಿಚ್ಚಿಟ್ಟ ಸಚಿವ ಡಾ. ಹೆಚ್.ಸಿ. ಮಹದೇವಪ್ಪ

BIG NEWS: ಕಳೆದ ಬಾರಿಯ ಸೋಲಿನ ಕಾರಣ ಬಿಚ್ಚಿಟ್ಟ ಸಚಿವ ಡಾ. ಹೆಚ್.ಸಿ. ಮಹದೇವಪ್ಪ

ಮೈಸೂರು: ಚುನಾವಣೆಯಲ್ಲಿ 6 ಬಾರಿ ಗೆದ್ದಿದ್ದೇನೆ, 3 ಬಾರಿ ಸೋತಿದ್ದೇನೆ. ಮೂರು ಬಾರಿ ನನ್ನಿಂದ ನಾನೇ ಸೋತಿದ್ದೇನೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಚಿವರು, ಜನರಿಗೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಚುನಾವಣೆಯಲ್ಲಿ ಸೋಲು ಕಂಡಿದ್ದೆ. ಮೂರು ಬಾರಿ ನನ್ನಿಂದ ನಾನೇ ಸೋತಿದ್ದೇನೆ. ಗೆದ್ದಾಗ ಮಂತ್ರಿಯಾಗುತ್ತಿದ್ದೆ. ಜನರಿಗೆ ಹೆಚ್ಚು ಸಮಯ ಕೊಡುತ್ತಿರಲಿಲ್ಲ. ಕಾರ್ಯಕರ್ತರಿಂದ ದೂರವಾಗಿದ್ದ ಕಾರಣ ಸೋಲಾಗಿತ್ತು. ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವತ್ತೂ ನಾನು ಟಿಕೆಟ್ ಕೇಳಿಲ್ಲ. ನನ್ನ ಹೋರಾಟ ನೋಡಿ ಟಿಕೆಟ್ ಕೊಟ್ಟಿದ್ದಾರೆ. ನಾನು ತೆರೆದ ಪುಸ್ತಕವಿದ್ದಂತೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ. ಆದರೆ ಪ್ರಚಾರ ಮಾಡಿಕೊಳ್ಳಲಿಲ್ಲ. ನನ್ನ ಅವಧಿಯಲ್ಲಿ ಎಲ್ಲವನ್ನು ಕ್ರೋಡೀಕರಿಸಿ ಉತ್ತಮ ದಸರಾ ಮಾಡಿದ್ದೇನೆ. ನಿಜವಾದ ವೈಚಾರಿಕತೆ ಹಾಗೂ ಸಂವಿಧಾನಿಕ ದಸರಾ ಆಚರಣೆ ಮಾದಿದ್ದೇನೆ ಎಂಬ ಸಂತೋಷವಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular