HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 108 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 531893 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣಗಳು ಕೂಡ ಕಡಿಮೆಯಾಗಿದ್ದು, ದೇಶದಲ್ಲಿ 1983 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44459514 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 142 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,32,512 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 74,749 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular