ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ವೇತನ ಶ್ರೇಣಿಯಲ್ಲಿನ ತಾರತಮ್ಯಕ್ಕೆ ತೆರೆ ಎಳೆದಿದ್ದು, ತರಬೇತಿ ಹೊಂದಿದ ಶಿಕ್ಷಕರ ವೇತನ ಶ್ರೇಣಿಗೆ ಸಮಾನವಾಗಿ ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಲಾಗಿದೆ.
ಈ ಎರಡು ವೃಂದಗಳ ವೇತನ ಶ್ರೇಣಿಯ ವಿಷಯ ನ್ಯಾಯಾಲಯದಲ್ಲಿ ಇತ್ಯರ್ಥವಾದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈಗ ಹೊಸದಾಗಿ ಆದೇಶ ಹೊರಡಿಸಿದ್ದು, ಹೀಗಾಗಿ ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರು ಇನ್ನು ಮುಂದೆ ಸಮಾನ ವೇತನ ಪಡೆಯಲಿದ್ದಾರೆ.