HomeKarnatakaಸರ್ಕಾರಿ ನೌಕರರಿಗೆ ಶೇ. 17ರಷ್ಟು ಮಧ್ಯಂತರ ಪರಿಹಾರ: ವಿವಿ, ಸ್ಥಳೀಯ ಸಂಸ್ಥೆ ನೌಕರರಿಗೂ ಸೌಲಭ್ಯ

ಸರ್ಕಾರಿ ನೌಕರರಿಗೆ ಶೇ. 17ರಷ್ಟು ಮಧ್ಯಂತರ ಪರಿಹಾರ: ವಿವಿ, ಸ್ಥಳೀಯ ಸಂಸ್ಥೆ ನೌಕರರಿಗೂ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಲಾದ ಶೇಕಡ 17 ರಷ್ಟು ತಾತ್ಕಾಲಿಕ ಪರಿಹಾರವನ್ನು ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳ ನೌಕರರಿಗೆ ವಿಸ್ತರಿಸುವ ಕುರಿತು ಸರ್ಕಾರ ಸ್ಪಷ್ಟೀಕರಣ ನೀಡಿದೆ.

ಸರ್ಕಾರದ ನೀತಿ ನಿರ್ಣಯದ ಅನ್ವಯ 7ನೇ ವೇತನ ಆಯೋಗದ ಅಂತಿಮ ವರದಿ ಕಾಯ್ದಿರಿಸಿ ಮಾರ್ಚ್ 1ರ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ನಿವೃತ್ತ ನೌಕರರಿಗೆ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲವೇತನ, ಮೂಲ ಪಿಂಚಣಿಯ ಶೇಕಡ 17ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಉಂಟಾಗುವ ಹೆಚ್ಚುವರಿ ಆರ್ಥಿಕ ಹೊರೆಯನ್ನು ಅನ್ವಯಿಸುವ ಸಂಸ್ಥೆಗಳ ಸ್ವಂತ ಸಂಪನ್ಮೂಲಗಳಿಂದ ಭರಿಸಲು ಸೂಚಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಿದ ಶೇಕಡ 17ರಷ್ಟು ತಾತ್ಕಾಲಿಕ ಪರಿಹಾರ ಸ್ಥಳೀಯ ಸಂಸ್ಥೆ, ವಿವಿ, ನಗರ ಸ್ಥಳೀಯ ಸಂಸ್ಥೆ ನೌಕರರಿಗೂ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular