HomeKarnatakaBIG NEWS: ಅಧಿವೇಶನ ಅರಂಭಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

BIG NEWS: ಅಧಿವೇಶನ ಅರಂಭಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

ಶಿವಮೊಗ್ಗ: ಅಕ್ಕಿ ವಿತರಣೆ ವಿಚಾರವಾಗಿ ಕಾಂಗ್ರೆಸ್ ಉದ್ದೇಶಪೂರ್ವಕ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈಗಾಗಲೇ ಕೇಂದ್ರ ಸರ್ಕಾರ 5ಕೆಜಿ ಉಚಿತ ಅಕ್ಕಿ ವಿತರಿಸುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ. ಕಾಂಗ್ರೆಸ್ ನವರು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಜನರಿಗೆ ಭರವಸೆ ಕೊಟ್ಟಿದ್ದರು. ಅದರಂತೆ ಈಗ ಅಕ್ಕಿ ವಿತರಣೆ ಮಾಡಬೇಕು. ಅದನ್ನು ಬಿಟ್ಟು ಅನಗತ್ಯ ಗೊಂದಲ ಉಂಟುಮಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ವಿಪಕ್ಷ ನಾಯಕನ ಆಯ್ಕೆ ವಿಚಾರ ವಿಳಂಬವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ವಿಪಕ್ಷ ನಾಯಕನ ಆಯ್ಕೆ ಶೀಘ್ರದಲ್ಲಿ ನಡೆಯಲಿದೆ. ಅಧಿವೇಶನ ಆರಂಭಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular