HomeKarnatakaBIG NEWS: ಜುಲೈ 1ರಿಂದ ಉಚಿತ ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಹೋರಾಟ; ಎಚ್ಚರಿಕೆ ನೀಡಿದ...

BIG NEWS: ಜುಲೈ 1ರಿಂದ ಉಚಿತ ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಹೋರಾಟ; ಎಚ್ಚರಿಕೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ


ಹುಬ್ಬಳ್ಳಿ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಹೆಚ್ಚು ದಿನ ನಡೆಯಲ್ಲ. ಯೋಜನೆಗಳ ಬಗ್ಗೆ ಸರ್ಕಾರ ಒಂದೊಂದೆ ಕುಂಟು ನೆಪಗಳನ್ನು ಹೇಳುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಉಚಿತ ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಈಗ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದೆ. ಮೊದಲೇ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಈಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಮತ್ತೊಂದೆಡೆ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ಜುಲೈ 1ರಿಂದ ಕೊಟ್ಟ ಮಾತಿನಂತೆ ಉಚಿತ ಅಕ್ಕಿ ಕೊಡದಿದ್ದರೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ನವರು ಗ್ಯಾರಂಟಿಯಿಂದ ಹಿಂದೆ ಸರಿಯುತ್ತಿದ್ದಂತೆ ಕಾಣುತ್ತಿದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ನಮಗೆ ಬಡ ಜನರಿಗೆ ಒಳ್ಳೆಯದಾಗುವುದು ಮುಖ್ಯ. ಉಚಿತ ಅಕ್ಕಿ ಕೊಡದೇ ಇದ್ದರೆ ಸರ್ಕಾರದ ವಿರುದ್ಧ ಹೋರಾಟ ಆರಂಭಿಸುತ್ತೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular