ಮಾಜಿ ಸಿಎಂ ಬಂಗಾರಪ್ಪನವರು ಓದಿದ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಕಲಿಕೆಗೆ ಅನುಮತಿ

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರು ವ್ಯಾಸಂಗ ಮಾಡಿದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಬಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಕಲಿಕೆಗೆ ಅನುಮತಿ ನೀಡಲಾಗಿದೆ.

ಈ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ವಿಷಯಗಳ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬಳಿಕ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಜಯ ಸಾಧಿಸಿದ್ದ ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾಗಿದ್ದು, ತಮ್ಮ ತಂದೆಯವರು ವ್ಯಾಸಂಗ ಮಾಡಿದ್ದ ಶಾಲೆ ಸೇರಿದಂತೆ ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡಲು ಮುಂದಾಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read