HomeKarnatakaBIG NEWS: ಅಕ್ಕಿ ಪೂರೈಸದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

BIG NEWS: ಅಕ್ಕಿ ಪೂರೈಸದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು; ಅನ್ನಭಾಗ್ಯ ಅಕ್ಕಿ ಯೋಜನೆಗಾಗಿ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿಭಟನೆಗೆ ಮುಂದಾಗಿದೆ.

ಕೇಂದ್ರ ಸರ್ಕಾರದ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಎಫ್ ಸಿ ಐ ಮೊದಲು ಅಕ್ಕಿ ನೀಡುವುದಾಗಿ ಹೇಳಿ ನಂತರ ಕೊಡಲಿಲ್ಲ. ಕೇಂದ್ರ ಸರ್ಕಾರ ಕೊಟ್ಟ ಮಾತು ವಾಪಸ್ ಪಡೆದ ಉದ್ದೇಶವೇನು? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದ ಜನ ಇದೆಲ್ಲವನ್ನೂ ನೋಡುತ್ತಿದ್ದಾರೆ. ಅನ್ನಭಾಗ್ಯ ಯೋಜನೆ ಯಶಸ್ವಿ ಆಗಬಾರದು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಹೊರರಾಜ್ಯಗಳಿಂದ ಅಕ್ಕಿ ಖರೀದಿಸಲು ಸಿಎಂ ನಿರ್ಧಾರ ಮಾಡಿದ್ದಾರೆ. ಬಹುತೇಕ ನಿಗದಿತ ಸಮಯಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular