ರಾಮನಗರ: ಜಮೀನಿಗೆ ಹೋಗುತ್ತಿದ್ದ ಸಹೋದರಿಯರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅಕ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಅಚ್ಚಲು ಗ್ರಾಮದಲ್ಲಿ ನಡೆದಿದೆ.
50 ವರ್ಷದ ಜಯಮ್ಮ ಮೃತರು. ಸಹೋದರಿ ವೆಂಕಟಲಕ್ಷ್ಮಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಸಹೋದರಿಯರು ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.