HomeIndiaBIG NEWS: ಧಾರಾಕಾರ ಮಳೆ; ತಮಿಳುನಾಡಿನ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ; ವಿಮಾನ ಹಾರಾಟದಲ್ಲಿಯೂ ವ್ಯತ್ಯಯ

BIG NEWS: ಧಾರಾಕಾರ ಮಳೆ; ತಮಿಳುನಾಡಿನ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ; ವಿಮಾನ ಹಾರಾಟದಲ್ಲಿಯೂ ವ್ಯತ್ಯಯ

ಚೆನ್ನೈ: ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿನ್ನೆ ತಡರಾತ್ರಿಯಿಂದ ತಮಿಳುನಾಡಿದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಳೆ ಹಿನ್ನೆಲೆಯಲ್ಲಿ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ವೆಲ್ಲೂರು, ರಾಣಿಪೇಟ್, ಚೆಂಗಲ್ ಪೇಟ್ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ ಭಾರಿ ಮಳೆಯಿಂದ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಚೆನ್ನೈಗೆ ಆಗಮಿಸುತ್ತಿದ್ದ ಅಂತರಾಷ್ಟ್ರೀಯ ವಿಮಾನದಲ್ಲಿ ವ್ಯತ್ಯವವಾಗಿದೆ. ಚೆನ್ನೈಗೆ ತೆರಳಬೇಕಿದ್ದ ಅಂತರಾಷ್ಟ್ರೀಯ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಗಿದೆ. ಇನ್ನು ಚೆನ್ನೈನಿಂದ ಹೊರಡಬೇಕಿದ್ದ 12 ಅಂತರಾಷ್ಟ್ರೀಯ ವಿಮಾನಗಳು ವಿಳಂಬವಾಗಿ ಹೊರಡುತ್ತಿವೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular