ಬೆಂಗಳೂರು : ರಾಜ್ಯ ಸರ್ಕಾರದ ಪಠ್ಯಪರಿಷ್ಕರಣೆ ತೀರ್ಮಾನ ವಿರೋಧಿಸಿ ಬಿಜೆಪಿ ( BJP) ಪ್ರತಿಭಟನೆ ನಡೆಸುತ್ತಿದೆ.
ನಿನ್ನೆ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಕನ್ನಡ ಪರ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಇಂದು ಚಿಕ್ಕಮಗಳೂರಿನಲ್ಲಿ ಪಠ್ಯಪರಿಷ್ಕರಣೆ ತೀರ್ಮಾನ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಚಿಕ್ಕಮಗಳೂರು BJP ಯುವಮೋರ್ಚಾ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಜೂನಿಯರ್ ಕಾಲೇಜು ಸಮೀಪ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಪಠ್ಯದ ಜೆರಾಕ್ಸ್ ಪ್ರತಿ ಹಂಚಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.