HomeKarnatakaBIG NEWS: ಕಂತೆ, ಕಂತೆ ಕಾಸು ಬರುವ ಖಾತೆ ಸಿಗಲಿಲ್ಲ ಎಂದು ಎಂ.ಬಿ. ಪಾಟೀಲ್ ಒದ್ದಾಡುತ್ತಿದ್ದಾರೆ;...

BIG NEWS: ಕಂತೆ, ಕಂತೆ ಕಾಸು ಬರುವ ಖಾತೆ ಸಿಗಲಿಲ್ಲ ಎಂದು ಎಂ.ಬಿ. ಪಾಟೀಲ್ ಒದ್ದಾಡುತ್ತಿದ್ದಾರೆ; ಸಚಿವರ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಪ್ರತಾಪ್ ಸಿಂಹ ಚಿಲ್ಲರೆ ರಾಜಕಾರಣ ಬಿಡಲಿ ಎಂಬ ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಕಿಡಿಕಾರಿರುವ ಸಂಸದ ಪ್ರತಾಪ್ ಸಿಂಹ, ಎಂ.ಬಿ. ಪಾಟೀಲ್ ಗೆ ಈಗ ಸಿಕ್ಕಿರುವ ಖಾತೆಯಲ್ಲಿ ಬರೀ ಚಿಲ್ಲರೆ ಸಿಗುತ್ತದೆ ಹಾಗಾಗಿ ಒದ್ದಾಡುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಎಂ.ಬಿ. ಪಾಟೀಲ್ ಗೆ ಕೂತ ಕಡೆ ಕಂತೆ ಕಂತೆ ಕಾಸು ಬರುವ ಖಾತೆ ಸಿಗಲಿಲ್ಲ ಅಂತಾ ವಿಲವಿಲ ಒದ್ದಾಡುತ್ತಿದ್ದಾರೆ. ಎಂ.ಬಿ. ಪಾಟೀಲ್ ಗೆ ಬರಿ ಚಿಲ್ಲರೇ, ನೋಟು ಇದರ ಬಗ್ಗೆ ಮಾತ್ರ ಚಿಂತೆ ಎಂದು ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯರನ್ನು ಓಲೈಕೆ ಮಾಡುವುದು ತಮ್ಮ ಖಾತೆ ಜವಾಬ್ದಾರಿ ಅಂತಾ ಪಾಟೀಲ್ ಅಂದುಕೊಂಡಿದ್ದಾರೆ. ಸಿದ್ದರಾಮಯ್ಯ ಬಂದೂಕಿಗೆ ಹೆಗಲು ಕೊಡೋದೆ ನಿಮ್ಮ ಕೆಲಸನಾ ? ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular