
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಕನ್ನಡಿಗರ ಮೇಲೆ ಕೇಂದ್ರ ಸರ್ಕಾರಕ್ಕೆ ಯಾಕಿಷ್ಟು ದ್ವೇಷ ? ಹೆಚ್ಚುವರಿ ಅಕ್ಕಿ ವಿತರಣೆ ಮಾಡಲು ನಿರಾಕರಿಸುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ್ದಕ್ಕೆ ರಾಜ್ಯದಲ್ಲಿ ಜನ ಅವರನ್ನು ಮನೆಗೆ ಕಳುಹಿಸದರು. ಮೊದಲು ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಕೊಡಲ್ಲ ಅಂತಿದ್ದಾರೆ. ಕೇಂದ್ರದ ಧೋರಣೆ ವಿರುದ್ಧ ಕಾಂಗ್ರೆಸ್ ನಾಳೆ ಪ್ರತಿಭಟನೆ ನಡೆಸಲಿದೆ. ಬಿಜೆಪಿಗೆ ಮತ ಹಾಕಿಲ್ಲ ಎಂದು ಕನ್ನಡಿಗರಿಗೆ ಮೋಸ ಮಾಡ್ತಿದ್ದೀರಾ ? ನಾಳೆ ಕಾಂಗ್ರೆಸ್ ನಡೆಸುವ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರೂ ಕೈಜೋಡಿಸಿ ಎಂದು ಕರೆ ನೀಡಿದ್ದಾರೆ.

